ರಾಜ್ಯದಲ್ಲಿಂದು 975 ಕೊರೋನ ಪ್ರಕರಣ ದೃಢ

Update: 2022-07-02 16:08 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಜು. 2: ರಾಜ್ಯದಲ್ಲಿ ಶನಿವಾರ 975 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, ಸೋಂಕಿನಿಂದ ಒಬ್ಬರು ಮೃತಪಟ್ಟು, 668 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,71,459ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,077ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 6,440ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 975 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 2, ಬಳ್ಳಾರಿ 1, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 871, ಬೀದರ್ 2, ಚಿಕ್ಕಬಳ್ಳಾಪುರ 2, ದಕ್ಷಿಣ ಕನ್ನಡ 14, ಧಾರವಾಡ 9, ಹಾಸನ 2, ಕಲಬುರಗಿ 3, ಕೋಲಾರ 9, ಮಂಡ್ಯ 1, ಮೈಸೂರು 22, ರಾಯಚೂರು 2, ರಾಮನಗರ 4, ಶಿವಮೊಗ್ಗ 6, ತುಮಕೂರು 5, ಉಡುಪಿ 6, ಉತ್ತರಕನ್ನಡ 6 ಪ್ರಕರಣಗಳು ಪತ್ತೆಯಾಗಿವೆ. 

ರಾಜಧಾನಿಯಲ್ಲಿ 871 ಜನರಿಗೆ ಸೋಂಕು ದೃಢ: ರಾಜಧಾನಿಯಲ್ಲಿ ಶನಿವಾರ 871 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 18,05,970 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,969 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 17,82,925 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News