ಉತ್ತರಪ್ರದೇಶ ಮುಖ್ಯಸ್ಥರನ್ನು ಬಿಟ್ಟು ರಾಷ್ಟ್ರ, ರಾಜ್ಯ ಕಾರ್ಯನಿರ್ವಾಹಕರನ್ನು ವಿಸರ್ಜಿಸಿದ ಸಮಾಜವಾದಿ ಪಕ್ಷ

Update: 2022-07-03 09:09 GMT

ಹೊಸದಿಲ್ಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಯುವಕರ ಮತ್ತು ಮಹಿಳಾ ವಿಭಾಗ ಸೇರಿದಂತೆ ಪಕ್ಷದ ಎಲ್ಲಾ ಸಂಘಟನೆಗಳ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರವಿವಾರ ವಿಸರ್ಜಿಸಿದ್ದಾರೆ.

ಯಾವುದೇ ಅಧಿಕೃತ ಕಾರಣವನ್ನು ನೀಡದಿದ್ದರೂ, ಪಕ್ಷದ ಭದ್ರಕೋಟೆಗಳಾದ ರಾಂಪುರ ಮತ್ತು ಅಜಂಗಢದಲ್ಲಿ ಲೋಕಸಭಾ ಉಪಚುನಾವಣೆ ಸೋಲಿನ ನಂತರ ಸಮಾಜವಾದಿ ಪಕ್ಷವನ್ನು ಪುನರುಜ್ಜೀವನಗೊಳಿಸುವ ಪ್ರಯತ್ನವಾಗಿ ಈ ಕ್ರಮವನ್ನು ನೋಡಲಾಗಿದೆ.

ಪಕ್ಷದ ಉತ್ತರ ಪ್ರದೇಶ ಅಧ್ಯಕ್ಷ ನರೇಶ್ ಉತ್ತಮ್ ಅವರು ತಮ್ಮ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಪಕ್ಷ ಹೇಳಿದೆ.

“ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಪಕ್ಷದ ರಾಜ್ಯಾಧ್ಯಕ್ಷರನ್ನು ಹೊರತುಪಡಿಸಿ, ತಕ್ಷಣವೇ ಜಾರಿಗೆ ಬರುವಂತೆ ಪಕ್ಷದ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಸಂಸ್ಥೆಗಳನ್ನು ವಿಸರ್ಜಿಸಿದ್ದಾರೆ. ಯುವ ಮತ್ತು ಮಹಿಳಾ ಘಟಕಗಳು ಸೇರಿದಂತೆ ಪಕ್ಷದ ಎಲ್ಲಾ ಸಂಘಟನೆಗಳ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರನ್ನು ಸಹ ವಿಸರ್ಜಿಸಲಾಗಿದೆ, ”ಎಂದು ಪಕ್ಷವು ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ತಿಳಿಸಿದೆ.

"ಪಕ್ಷವು 2024 ರ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದೆ ಮತ್ತು ಬಿಜೆಪಿಯನ್ನು ಪೂರ್ಣ ಬಲದಿಂದ ಎದುರಿಸಲು ಸಂಘಟನೆಯನ್ನು ಬಲಪಡಿಸುವತ್ತ ಗಮನ ಹರಿಸಲಾಗಿದೆ" ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News