ಕೊಪ್ಪಳ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ

Update: 2022-07-03 13:06 GMT
ಸಾಂದರ್ಭಿಕ ಚಿತ್ರ

ಕೊಪ್ಪಳ, ಜು. 3: ಚಲಿಸುತ್ತಿದ್ದ ರೈಲಿನಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಿಡದಾಳ್ ರೈಲ್ವೆ ಗೇಟ್ ಬಳಿ ನಡೆದಿದೆ.

ಬಳ್ಳಾರಿ ಮೂಲದ ತೇಜಶ್ರೀ(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಮೂರು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತೇಜಶ್ರೀ ಜು.2 ಸಂಜೆ ಹೊತ್ತಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News