ಬೆಂಗಳೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

Update: 2022-07-03 16:46 GMT

ಬೆಂಗಳೂರು, ಜು.3: ಇಲ್ಲಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಸುಮಾರು 25 ರಿಂದ 30 ವರ್ಷದ ಮಹಿಳೆಯ ಶವ ಎಂದು ಅಂದಾಜಿಸಲಾಗಿದ್ದು, ಮಹಿಳೆಯ ಮೃತದೇಹ ಗುರುತು ಸಿಗದಿರುವ ರೀತಿಯಲ್ಲಿದೆ.

ಮಹಿಳೆ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News