ಹಿಮಾಚಲ ಪ್ರದೇಶ: ಖಾಸಗಿ ಬಸ್ ಕಮರಿಗೆ ಬಿದ್ದು ಶಾಲಾ ಮಕ್ಕಳು ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಮೃತ್ಯು

Update: 2022-07-04 04:52 GMT
Photo: Twitter/@ANI

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸೋಮವಾರ   ಖಾಸಗಿ ಬಸ್ ವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 12ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ  ಎಂದು NDTV ವರದಿ ಮಾಡಿದೆ.

ಅಪಘಾತದ ತೀವ್ರತೆಗೆ ಬಸ್  ಸಂಪೂರ್ಣ ನುಜ್ಜುಗುಜ್ಜಾಗಿರುವುದು ದೃಶ್ಯದಲ್ಲಿ ಕಂಡುಬಂದಿದೆ.

 ಸಾಯಿಂಜ್‌ಗೆ ಹೋಗುತ್ತಿದ್ದ ಬಸ್ ಬೆಳಿಗ್ಗೆ 8.30 ರ ಸುಮಾರಿಗೆ ಜಂಗ್ಲಾ ಗ್ರಾಮದ ಬಳಿ ಕಮರಿಗೆ ಬಿದ್ದಿದೆ. ಜಿಲ್ಲಾ ಅಧಿಕಾರಿಗಳು ಹಾಗೂ  ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಕುಲ್ಲು ಡೆಪ್ಯುಟಿ ಕಮಿಷನರ್ ಅಶುತೋಷ್ ಗರ್ಗ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News