ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣ: ಎಡಿಜಿಪಿ ಅಮೃತ್ ಪೌಲ್ ಬಂಧನ

Update: 2022-07-04 09:55 GMT

ಬೆಂಗಳೂರು, ಜು.4: 545 ಪಿಎಸ್ಸೈ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಅಮೃತ್ ಪೌಲ್ ಅವರು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಸಮಯದಲ್ಲಿ ಪಿಎಸ್ಸೈ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಈ ಹಿಂದೆ ಮೂರು ಅವರು ತನಿಖೆಗೆ ಹಾಜರಾಗಿದ್ದರು. ಇಂದು ನಾಲ್ಕನೆ ಬಾರಿಗೆ ಅವರು ತನಿಖೆಗೆ ಹಾಜರಾದ ಸಂದರ್ಭ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಅವರನ್ನು ಅವರನ್ನು ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News