ಕಾಸರಗೋಡು ಜಿಲ್ಲೆಯಲ್ಲಿ ಎಚ್1ಎನ್1 ಸೋಂಕು ಪತ್ತೆ: ಮುಂಜಾಗ್ರತಾ ಕ್ರಮಕ್ಕೆ ಆರೋಗ್ಯ ಇಲಾಖೆ ಸೂಚನೆ

Update: 2022-07-04 10:05 GMT
ಸಾಂದರ್ಭಿಕ ಚಿತ್ರ (source: PTI)

 ಕಾಸರಗೋಡು, ಜು.4: ಜಿಲ್ಲೆಯ ಕೆಲ ಸ್ಥಳಗಳಲ್ಲಿ  ಎಚ್1ಎನ್1 ಸೋಂಕು ದೃಢ ಪಟ್ಟಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾ ವೈದ್ಯಾಧಿಕಾರಿ ಡಾ.ರಾಮ್ ದಾಸ್ ಸೂಚಿಸಿದ್ದಾರೆ.

'ಇನ್ ಫ್ಲುಯೆನ್ಸ ಎ' ಎಂಬ  ಗುಂಪಿನ  ವೈರಸ್ ಇದಾಗಿದ್ದು, ಸಾಮಾನ್ಯವಾಗಿ ಹಂದಿಗಳಲ್ಲಿ ಈ ಸೋಂಕು ಹೆಚ್ಚಾಗಿ ಕಂಡುಬರುತ್ತದೆ. ಆದ್ದರಿಂದ  ಹಂದಿ ಸಾಕಣೆ ಹೊಂದಿರುವವರು ಈ ಬಗ್ಗೆ  ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ಈ ಸೋಂಕು ಒಬ್ಬರಿಂದ ಒಬ್ಬರಿಗೆ ಬೇಗನೆ ಹರಡುವುದರಿಂದ ಹೆಚ್ಚಿನ ಮುಂಜಾಗ್ರತಾ ಕ್ರಮ ತೆಗೆದು ಕೊಳ್ಳುವಂತೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕೋವಿಡ್-19 ಸಾಂಕ್ರಾಮಿಕದ ಹಾವಳಿ ಕಡಿಮೆಯಾಗುತ್ತಿದ್ದಂತೆ ಇದೀಗ ಎಚ್1ಎನ್1 ಕಾಣಿಸಿಕೊಂಡಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News