ನಾಟಕ ಪ್ರದರ್ಶನಕ್ಕೆ ಆರೆಸ್ಸೆಸ್ ಅಡ್ಡಿಪಡಿಸಿರುವುದು ಸಾಂಸ್ಕೃತಿಕ ಭಯೋತ್ಪಾದನೆ: ಸಿದ್ದರಾಮಯ್ಯ

Update: 2022-07-04 12:22 GMT

ಬೆಂಗಳೂರು: ಶಿವಮೊಗ್ಗದ ಅನವಟ್ಟಿಯಲ್ಲಿ ಕನ್ನಡ ನಾಟಕ 'ಜತೆಗಿರುವನು ಚಂದಿರ' ಪ್ರದರ್ಶನಕ್ಕೆ ಆರೆಸ್ಸೆಸ್ ಅಡ್ಡಿಪಡಿಸಿರುವುದು ಸಾಂಸ್ಕೃತಿಕ ಭಯೋತ್ಪಾದನೆಯಲ್ಲದೆ ಮತ್ತೇನಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  ಈ ಗೂಂಡಾಗಿರಿಯಲ್ಲಿ ಪಾಲುದಾರರಾದ ಎಲ್ಲಾ ದುಷ್ಕರ್ಮಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಿ, ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. 

ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಪರವಾಗಿರುವ ಸಾಹಿತ್ಯ,‌ ನಾಟಕ ಕಲೆ‌ ಮೊದಲಾದ‌‌‌ ಸಾಂಸ್ಕೃತಿಕ ಅಭಿವ್ಯಕ್ತಿಗಳನ್ನು ಕಂಡರೆ ಆರೆಸ್ಸೆಸ್ ಮತ್ತು ಪರಿವಾರಕ್ಕೆ ಭಯ. ಈ ದಾಳಿಗೂ ಇದೇ ಕಾರಣ. ಇಂತಹ ಅಡ್ಡಿ-ಆತಂಕಗಳನ್ನು ಎದುರಿಸುವ ಚೈತನ್ಯ‌ ಕನ್ನಡದ ಸಾಂಸ್ಕೃತಿಕ‌ ಲೋಕಕ್ಕೆ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನು ಓದಿ... ಸೊರಬ: ಜಯಂತ ಕಾಯ್ಕಿಣಿ ಅವರ 'ಜತೆಗಿರುವನು ಚಂದಿರ' ನಾಟಕಕ್ಕೆ ಸಂಘಪರಿವಾರದಿಂದ ಅಡ್ಡಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News