ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Update: 2022-07-05 06:04 GMT

ಬೆಂಗಳೂರು, ಜು.4: ಅರಬ್ಬೀ ಸಮುದ್ರದಲ್ಲಿನ ಮೇಲ್ಮೈಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ, ಮಲೆನಾಡು ಸೇರಿ ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮುಂದಿನ ಎರಡು ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಮಲೆನಾಡು ಭಾಗ ಸೇರಿ ಪಶ್ಚಿಮ ಘಟ್ಟದಲ್ಲಿಯೂ ಭಾರೀ ಮಳೆಯ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಇದನ್ನೂ ಓದಿ... ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆ; ಶಾಲಾ-ಕಾಲೇಜುಗಳಿಗೆ ರಜೆ

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News