ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಝುಬೈರ್ ವಿರುದ್ಧ ಹೊಸ ಪ್ರಕರಣ ದಾಖಲು

Update: 2022-07-04 16:49 GMT

ಸಿತಾಪುರ (ಉತ್ತರಪ್ರದೇಶ), ಜು. 4:  ಮೂವರು ವ್ಯಕ್ತಿಗಳ ಬಗ್ಗೆ ಟ್ವೀಟ್ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿ ‘ಆಲ್ಟ್ ನ್ಯೂಸ್’ನ ಸಹ ಸ್ಥಾಪಕ ಮುಹಮ್ಮದ್ ಝುಬೈರ್ ಅವರನ್ನು ಸೀತಾಪುರಕ್ಕೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಮುಹಮ್ಮದ್ ಝುಬೈರ್ ಅವರು ಸಲ್ಲಿಸಿದ ಜಾಮೀನು ಅರ್ಜಿಯನ್ನು ದಿಲ್ಲಿ ನ್ಯಾಯಾಲಯ ಶನಿವಾರ ತಿರಸ್ಕರಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಮಹಾಂತ ಬಜರಂಗ ಮುನಿ, ಯತಿ ನರಸಿಂಗಾನಂದ ಸರಸ್ವತಿ ಹಾಗೂ ಆನಂದ ಸ್ವರೂಪ್ ಅವರನ್ನು ಗುರಿಯಾಗಿರಿಸಿ ಟ್ವೀಟ್ ಮಾಡಲಾಗಿದೆ. ಅಲ್ಲದೆ, ಅವರನ್ನು ‘‘ದ್ವೇಷ ಹರಡುವವರು’’ ಎಂದು ಆರೋಪಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. 
 ಹಿಂದೂ ಶೇರ್ ಸೇನಾದ ಜಿಲ್ಲಾಧ್ಯಕ್ಷ ಭಗವಾನ್ ಶರಣ್ ನೀಡಿದ ದೂರಿನ ಆಧಾರದಲ್ಲಿ ಈ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News