ಭ್ರಷ್ಟಾಚಾರ ಪ್ರಕರಣ: ಬಂಧಿತ ಎಡಿಜಿಪಿ ಅಮೃತ್ ಪೌಲ್ - ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅಮಾನತು

Update: 2022-07-04 17:54 GMT
       ಅಮೃತ್ ಪೌಲ್  |   ಜೆ.ಮಂಜುನಾಥ್

ಬೆಂಗಳೂರು, ಜು.4: 545 ಪಿಎಸ್ಸೈ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಎಡಿಜಿಪಿ ಅಮೃತ್ ಪೌಲ್ ಅವರನ್ನು ಆಂತರಿಕ ವಿಭಾಗದ ಎಡಿಜಿಪಿ ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ಅಮೃತ್ ಪೌಲ್ ಅವರು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಸಮಯದಲ್ಲಿ ಪಿಎಸ್ಸೈ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಈ ಹಿಂದೆ ಮೂರು ಅವರು ತನಿಖೆಗೆ ಹಾಜರಾಗಿದ್ದರು. ಇಂದು ನಾಲ್ಕನೆ ಬಾರಿಗೆ ಅವರು ತನಿಖೆಗೆ ಹಾಜರಾದ ಸಂದರ್ಭ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

5 ಲಕ್ಷರೂ. ಲಂಚಕ್ಕೆ ಬೇಡಿಕೆ ಆರೋಪ ಪ್ರಕರಣ ಸಂಬಂಧಿಸಿ ಬಂಧಿತರಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಆಗಿದ್ದ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅವರನ್ನೂ ಸರಕಾರ ಅಮಾನತುಗೊಳಿಸಿ ಆದೇಶಿಸಿದೆ. 

ಮಂಜುನಾಥ್ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಹುದ್ದೆಯಿಂದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿ ಇತ್ತೀಚಿಗಷ್ಟೇ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News