ದಿಲ್ಲಿ-ದುಬೈ ಸ್ಪೈಸ್ ಜೆಟ್ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ
Update: 2022-07-05 13:14 IST
ಹೊಸದಿಲ್ಲಿ: ದಿಲ್ಲಿಯಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ನಂತರ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
ಸ್ಪೈಸ್‌ಜೆಟ್ ವಿಮಾನದ ಇಂಡಿಕೇಟರ್ ಲೈಟ್ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಇಂದು ಕರಾಚಿಗೆ ವಿಮಾನವನ್ನು ಡೈವರ್ಟ್ ಮಾಡ ಬೇಕಾಯಿತು ಎಂದು ಏರ್‌ಲೈನ್‌ನ ವಕ್ತಾರರು ತಿಳಿಸಿದ್ದಾರೆ.
ಕರಾಚಿಯಲ್ಲಿ ವಿಮಾನ ಲ್ಯಾಂಡ್ ಆಗಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ವಿಮಾನದಲ್ಲಿ ಯಾವುದೇ ಅಸಮರ್ಪಕ ಕಾರ್ಯದ ಬಗ್ಗೆ ಈ ಹಿಂದೆ ವರದಿಯಾಗಿಲ್ಲ. ಪ್ರಯಾಣಿಕರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರನ್ನು ದುಬೈಗೆ ಕರೆದೊಯ್ಯುವ ಬದಲಿ ವಿಮಾನವನ್ನು ಕರಾಚಿಗೆ ಕಳುಹಿಸಲಾಗುತ್ತಿದೆ ಎಂದು ಏರ್‌ಲೈನ್‌ನ ವಕ್ತಾರರು ತಿಳಿಸಿದ್ದಾರೆ.