ಶಾಸಕ ಝಮೀರ್ ಅಹ್ಮದ್ ಮನೆ ಮೇಲಿನ ಎಸಿಬಿ ದಾಳಿ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

Update: 2022-07-05 11:57 GMT

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಚಾಮರಾಜಪೇಟೆ ಶಾಸಕ ಝಮೀರ್‌ ಅಹ್ಮದ್‌ ಖಾನ್‌ ಅವರ ನಿವಾಸ, ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿ, ಶೋಧ ನಡೆಸುತ್ತಿದ್ದು, ಇದು ರಾಜಕೀಯ ಪ್ರೇರಿತ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು,  ಪಿಎಸ್‌ಐ ಹಗರಣದಲ್ಲಿ ಸರ್ಕಾರದ ಸಚಿವರು, ಮಾಜಿ ಮುಖ್ಯಮಂತ್ರಿಗಳ ಮಗ ಭಾಗಿಯಾದ ಆರೋಪ ಕೇಳಿಬರುತ್ತಿದ್ದು, ಜನರ ಗಮನ ಬೇರೆಡೆಗೆ ತಿರುಗಿಸಲು ನಮ್ಮ‌ ಪಕ್ಷದ ಶಾಸಕರಾದ ಝಮೀರ್ ಅಹ್ಮದ್ ಅವರ ಮನೆ, ಕಚೇರಿಗಳ ಮೇಲೆ ಎಸಿಬಿ ಮೂಲಕ ದಾಳಿ ಮಾಡಿಸಲಾಗಿದೆ. ಇಂಥಾ ರಾಜಕೀಯ ಪ್ರೇರಿತ ಎಸಿಬಿ ದಾಳಿಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News