​ಉತ್ತರ ಕನ್ನಡ ಜಿಲ್ಲೆ: ಜು.6ರಂದು ಶಾಲಾ-ಕಾಲೇಜುಗಳಿಗೆ ರಜೆ

Update: 2022-07-05 12:33 GMT

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜು.6ರಂದು (ಬುಧವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ  ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News