ಕುಂದಾಪುರ: ರಸ್ತೆ ಅಪಘಾತ; ಮೂವರು ವಿದ್ಯಾರ್ಥಿಗಳಿಗೆ ಗಾಯ
Update: 2022-07-05 18:59 IST
ಭಟ್ಕಳ: ತರಾಸಿಯಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿದ್ದ ಕಾರೊಂದು ಅಪಘಾತಕ್ಕೀಡಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ನಾವುಂದದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.
ಕಾರಿನಲ್ಲಿ ಚಾಲಕ ಸೇರಿದಂತೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಮುಂದೆ ಹೋಗುತ್ತಿದ್ದ ವಾಹನ ರಸ್ತೆಯ ಬದಿ ನಿಲ್ಲಿಸಿದ್ದ ಕಾರಣ ನಿಯಂತ್ರಣ ತಪ್ಪದ ವಿದ್ಯಾರ್ಥಿಗಳಿದ್ದ ಕಾರು ನಿಲ್ಲಿಸಿದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗಜ್ಜಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.