×
Ad

ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ: ಅರ್ಜಿ ಆಹ್ವಾನ

Update: 2022-07-05 19:13 IST

ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಸ್ಪಶ್ಯತಾ ನಿವಾರಣೆ, ಎಸ್‌ಸಿ ಹಾಗೂ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಇಲಾಖಾ ಕಾರ್ಯಕ್ರಮ ಹಾಗೂ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ, ಕಾರ್ಯಾಗಾರ ಮತ್ತು ಬೀದಿ ನಾಟಕಗಳಂತಹ ಕಾರ್ಯಕ್ರಮಗಳನ್ನು ನಡೆಸಲು ಅರ್ಹ ಎಸ್‌ಸಿ ಹಾಗೂ ಎಸ್‌ಟಿ ಸಂಘ- ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮಗಳನ್ನು ನಡೆಸಲು ಕನಿಷ್ಠ ೫ ವರ್ಷ ಸೇವೆ ಸಲ್ಲಿಸಿರುವ, ಪ್ರಸ್ತುತ ಸಂಸ್ಥೆಯ ನೋಂದಣಿ ಚಾಲ್ತಿಯಲ್ಲಿರುವ, ಪರಿಶಿಷ್ಟ ಜಾತಿ, ಪಂಗಡದ ಜನರ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳು ಜುಲೈ ೧೫ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ ಮಣಿಪಾಲ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News