ಪಾದಚಾರಿ ಮಾರ್ಗಗಳಲ್ಲಿನ ಟ್ರಾನ್ಸ್ ಫಾರ್ಮರ್ 2 ತಿಂಗಳಲ್ಲಿ ಸ್ಥಳಾಂತರ: ಹೈಕೋರ್ಟ್ ಗೆ ಬೆಸ್ಕಾಂ ಮಾಹಿತಿ

Update: 2022-07-05 14:04 GMT
ಫೈಲ್ ಚಿತ್ರ

ಬೆಂಗಳೂರು, ಜು.5: ನಗರದ ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಿರುವ 862 ಟ್ರಾನ್ಸ್‍ಫಾರ್ಮರ್ ಗಳನ್ನು 2 ತಿಂಗಳಲ್ಲಿ ಸ್ಥಳಾಂತರ ಮಾಡಲಾಗುತ್ತದೆ ಎಂದು ಹೈಕೋರ್ಟ್‍ಗೆ ಬೆಸ್ಕಾಂ ತಿಳಿಸಿದೆ.

ಟ್ರಾನ್ಸ್‍ಫಾರ್ಮರ್ ತೆರವು ಮಾಡಲು ನಿರ್ದೇಶನ ಕೋರಿ ನಿವೃತ್ತ ವಿಂಗ್ಕಮಾಂಡರ್ ಜಿ.ಬಿ ಅತ್ರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ವಿಚಾರಣೆ ವೇಳೆ ಬೆಸ್ಕಾಂ(ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ) ಪರ ವಕೀಲರು ವಾದಿಸಿ, ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಲಾಗಿರುವ 2,587 ಟ್ರಾನ್ಸ್‍ಫಾರ್ಮರ್‍ಗಳನ್ನು ಸ್ಥಳಾಂತರಿಸಲು ಗುರುತಿಸಲಾಗಿದೆ. ಈವರೆಗೆ 620 ಟ್ರಾನ್ಸ್‍ಫಾರ್ಮರ್‍ಗಳನ್ನು ಸ್ಥಳಾಂತರಿಸಲಾಗಿದೆ. ಉಳಿದ 862 ಟ್ರಾನ್ಸ್‍ಫಾರ್ಮರ್ ಗಳನ್ನು ಸ್ಥಳಾಂತರಿಸಲು ಎರಡು ತಿಂಗಳ ಗುರಿ ಇರಿಸಿಕೊಳ್ಳಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. 

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸ್ಥಳಾಂತರ ಕಾರ್ಯದ ಪ್ರಗತಿ ವರದಿ ಸಲ್ಲಿಸಲು ನಿರ್ದೇಶಿಸಿ ವಿಚಾರಣೆಯನ್ನು ಸೆ.12ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ ವಾದ ಮಂಡಿಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News