ಜು.6ರಂದು ಉಡುಪಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ: ಡಿಸಿ ಕೂರ್ಮಾರಾವ್
Update: 2022-07-05 19:52 IST
ಉಡುಪಿ : ಹವಮಾನ ಇಲಾಖೆಯ ಮನ್ಸೂಚನೆಯಂತೆ ಹಾಗೂ ಪ್ರಸ್ತುತ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜು.6ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.