ಪುತ್ತೂರು; ಹೆಬ್ಬಾವು ಕೊಂದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2022-07-05 17:03 GMT

ಪುತ್ತೂರು: ಹೆಬ್ಬಾವೊಂದನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ದ್ದಾರೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ (38) ಮತ್ತು ಜಯ(36) ಬಂಧಿತ ಆರೋಪಿಗಳು.

ಅವರು ಮನೆಗೆ ಬಂದಿದ್ದ ಹೆಬ್ಬಾವನ್ನು ಕೊಂದು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ್ದರು. ಹೆಬ್ಬಾವನ್ನು ಕೊಲ್ಲುವುದು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗಿರುವ ಕಾರಣ ಪ್ರಕರಣ ಪತ್ತೆ ಹಚ್ಚಿದ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿ ಕೇಸು ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ  ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾರ್ಯಪ್ಪ ರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಬಿ. ಎಮ್. ಉಪ ವಲಯ ಅರಣ್ಯಾಧಿಕಾರಿಗಳಾದ ಲೋಕೇಶ್, ಅರಣ್ಯ ರಕ್ಷಕರುಗಳಾದ ದೀಪಕ, ನಿಂಗರಾಜ್ ಮತ್ತು ಇಲಾಖೆ ವಾಹನ ಚಾಲಕರಾದ ಜಗದೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News