ನಾನು ಲಕ್ಕಿಡಿಪ್‌ ಸಿಎಂ, ಏನೀಗ?: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ

Update: 2022-07-06 08:19 GMT
ಫೈಲ್ ಚಿತ್ರ

ಬೆಂಗಳೂರು: ''ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ?'' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. 

ಈ ಕುರಿತು  ಟ್ವೀಟ್ ಮಾಡಿರುವ ಅವರು,  'ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ' ಎಂದು ಹೇಳಿದ್ದಾರೆ.

ಇದನ್ನೂ ಓದಿ... ''ದಯವಿಟ್ಟು ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ": ಬಿಜೆಪಿ ಮಾಜಿ ಶಾಸಕರ ಮನವಿ

'ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ; 1.ಯಡಿಯೂರಪ್ಪ & ಸನ್ಸ್‌ 2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ 3.ಅಶೋಕ್-ರವಿ 4.ವಿ.ಸೋಮಣ್ಣ-ಅರುಣ್‌ ಸೋಮಣ್ಣ 5.ಅರವಿಂದ ಲಿಂಬಾಳಿ-ರಘು 6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌ 7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌ 8.ಮುರುಗೇಶ ನಿರಾಣಿ-ಹನುಮಂತ ನಿರಾಣಿ 9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್ 10.ಜಾರಕಿಹೊಳಿ ಕುಟುಂಬ 11.ಕತ್ತಿ ಕುಟುಂಬ 12.ಜೊಲ್ಲೆ ಕುಟುಂಬ 13.ಅಂಗಡಿ ಕುಟುಂಬ 14.ಉದಾಸಿ ಕುಟುಂಬ 15.ಶ್ರೀರಾಮುಲು ಕುಟುಂಬ 16.ರೆಡ್ಡಿ ಬ್ರದರ್ಸ್‌' 

'ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. 'ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ' ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ? ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ 'ಪರಿವಾರಕೋಟಿ'ಯನ್ನೇ ಬರೆಯಬಹುದು ' ಎಂದು ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಗಾರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News