ಕಡಬ; ನಿಯಂತ್ರಣ ತಪ್ಪಿದ ಕಾರು ಪಲ್ಟಿ: ಇಬ್ಬರಿಗೆ ಗಂಭೀರ ಗಾಯ

Update: 2022-07-06 09:09 GMT

ಕಡಬ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪ ಬುಧವಾರ ನಡೆದಿದೆ.

ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News