ಮುಂದುವರಿದ ಭಾರೀ ಮಳೆ; ಕೊಡಗು ಜೆಲ್ಲೆಯ ಶಾಲೆ-ಕಾಲೇಜುಗಳಿಗೆ ನಾಳೆ (ಜು.7) ರಜೆ
Update: 2022-07-06 15:03 IST
ಮಡಿಕೇರಿ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.7ರಂದು (ಗುರುವಾರ) ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯಾಗಿರುವುದರಿಂದ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜು.7ರಂದು (ಗುರುವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲೆ-ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಆದೇಶಿಸಿದ್ದಾರೆ.