ಜು.7ರಂದು ಶಾಲಾ-ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

Update: 2022-07-06 13:48 GMT

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 07/07/2022ರಂದು (ಗುರುವಾರ) ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಸ್ನಾತಕೊತ್ತರ ಪದವಿ, ಡಿಪ್ಲೊಮ, ಇಂಜಿನಿಯರಿಂಗ್‌, ಐಟಿಐ ಸೇರಿದಂತೆ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News