ಡಾ. ವೀರೇಂದ್ರ ಹೆಗ್ಗಡೆ, ಪಿಟಿ ಉಷಾ, ಇಳಯರಾಜ, ವಿಜಯೇಂದ್ರ ಪ್ರಸಾದ್ ರಾಜ್ಯಸಭೆಗೆ ನಾಮನಿರ್ದೇಶನ

Update: 2022-07-06 15:30 GMT

ಹೊಸದಿಲ್ಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಸಂಸತ್ತಿನ ಮೇಲ್ಮನೆಯ ನೂತನ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಅವರೊಂದಿಗೆ ಚಲನಚಿತ್ರ ಸಂಗೀತ ನಿರ್ದೇಶಕ ಇಳಯರಾಜ, ಖ್ಯಾತ ಅಥ್ಲೀಟ್ ಪಿಟಿ ಉಷಾ ಮತ್ತು ಚಲನಚಿತ್ರ ನಿರ್ಮಾಪಕ ವಿ ವಿಜಯೇಂದ್ರ ಪ್ರಸಾದ್ ಅವರು ಬುಧವಾರ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ.  

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ನೂತನ ಸದಸ್ಯರಿಗೆ ಅಭಿನಂದನಾ ಟ್ವೀಟ್‌ಗಳನ್ನು ಮಾಡಿದ್ದು, ಅವರು ಪ್ರತಿಯೊಬ್ಬ ಭಾರತೀಯರಿಗೆ ಸ್ಫೂರ್ತಿ ಎಂದು ಕರೆದಿದ್ದಾರೆ.

“ಗಮನಾರ್ಹ ಪಿಟಿ ಉಷಾ ಜಿ ಅವರು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಯಲ್ಲಿ ಅವರ ಸಾಧನೆಗಳು ವ್ಯಾಪಕವಾಗಿ ಗುರುತಿಸಿವೆ. ಕಳೆದ ಹಲವಾರು ವರ್ಷಗಳಿಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸವು ಅಷ್ಟೇ ಶ್ಲಾಘನೀಯವಾಗಿದೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಅವರಿಗೆ ಅಭಿನಂದನೆಗಳು' ಎಂದು ಮೋದಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇಳಯರಾಜ ಅವರ ಸೃಜನಶೀಲ ಪ್ರತಿಭೆ ತಲೆಮಾರುಗಳಿಂದಲೂ ಜನರನ್ನು ಆಕರ್ಷಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ. "ಅವರ ಸಂಗೀತಗಳು ಅನೇಕ ಭಾವನೆಗಳನ್ನು ಸುಂದರವಾಗಿ ಪ್ರತಿಬಿಂಬಿಸುತ್ತವೆ. ಅವರ ಜೀವನ ಪಯಣ ಅಷ್ಟೇ ಸ್ಪೂರ್ತಿದಾಯಕವಾಗಿದೆ. ಅವರು ವಿನಮ್ರ ಹಿನ್ನೆಲೆಯಿಂದ ಬೆಳೆದು ತುಂಬಾ ಸಾಧಿಸಿದ್ದಾರೆ. ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಸಂತಸ ತಂದಿದೆ” ಎಂದು ಮೋದಿ ಬರೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News