ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Update: 2022-07-06 15:45 GMT

ಉಡುಪಿ, ಜು.೬: ಬ್ರಹ್ಮಾವರ ತಾಲೂಕು ಚಾಂತಾರು ಗ್ರಾಪಂನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕಾರ್ತಿಕ್ ಪೈ, ಹಂದಾಡಿ ಗ್ರಾಪಂನ  ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಬ್ರಹ್ಮಾವರ ತಾಪಂ ಕಾರ್ಯನಿರ್ವಹಣಾಧಿಕಾರಿ ಇಬ್ರಾಂಪುರ್ ಇವರನ್ನು ಚುನಾವಣಾ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ.

ಅದೇ ರೀತಿ ಕುಂದಾಪುರ ತಾಲೂಕು ಅಂಪಾರು ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಆಯ್ಕೆಗೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಸಂದೇಶ್, ಹೆಮ್ಮಾಡಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಆಯ್ಕೆಗೆ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ಮತ್ತು ಬೈಂದೂರು ತಾಲೂಕು ಕೆರ್ಗಾಲು ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ಅಧಿಕಾರಿ ಪರಶುರಾಮ ಎಂ ಮುತ್ತಪ್ಪಗೋಳ ಅವರನ್ನು ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News