ಹರೇಕಳ: ಸೇತುವೆಯಲ್ಲಿ ನಡೆದುಕೊಂಡು ಹೋಗಲು ಷರತ್ತಿನೊಂದಿಗೆ ಅನುಮತಿ

Update: 2022-07-06 17:43 GMT

ಕೊಣಾಜೆ; ಕಳೆದ‌ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನೇತ್ರಾವತಿ ನದಿ ನೀರಿನ ಹರಿವು ಹೆಚ್ಚಾಗಿದ್ದು ಹರೇಕಳದಿಂದ ಅಡ್ಯಾರ್ ಗೆ  ದೋಣಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಈ ಭಾಗದ ಜನರಿಗೆ ತೊಂದರೆಯಾಗಿದ್ದು ನಿರ್ಮಾಣ ಹಂತದ ಸೇತುವೆಯ ಮೇಲೆ ನಡೆದುಕೊಂಡು ಹೋಗಲು ಅವಕಾಶ ಒದಗಿಸುವಂತೆ ಶಾಸಕರಲ್ಲಿ ಮನವಿ ಮಾಡಿದ್ದರು. ಅಣೆಕಟ್ಡು/ಸೇತುವೆಯಲ್ಲಿ ನಡೆದುಕೊಂಡು ಹೋಗಲು ಬುಧವಾರ ಷರತ್ತುಬದ್ದ ಅನುಮತಿ ನೀಡಲಾಗಿದೆ.

 ಬುಧವಾರ ಹರೇಕಳ ಪಂಚಾಯತಿ ಅಧ್ಯಕ್ಷರಾದ ಬದ್ರುದ್ದೀನ್ ಅವರು ಸೇತುವೆ ಗುತ್ತಿಗೆದಾರರು, ಸಣ್ಣ ನೀರಾವರಿ ಇಲಾಖೆ ಹಾಗೂ ಇತರ ಅಧಿಕಾರಿಗಳನ್ನು ಸಂಪರ್ಕಿಸಿ ಚರ್ಚೆ ನಡೆಸಿದ್ದರು.

ಮುಖ್ಯವಾಗಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅವಕಾಶ ಒದಗಿಸಲಾಗಿದೆ. ಹಾಗೂ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನಿರಾಕರಿಸಲಾಗಿದೆ. ಸೇತುವೆಯ ಮೇಲೆ ಅನಾವಶ್ಯಕವಾಗಿ ತಿರುಗಾಡುವುದು, ವೀಕ್ಷಣೆ ಮಾಡುವುದನ್ನು ನಿರ್ಭಂದಿಸಲಾಗಿದೆ. ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಣಯಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News