ರಾಜ್ಯದಲ್ಲಿ 10 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ: ಹೈಕೋರ್ಟ್ ಗೆ ವರದಿ ಸಲ್ಲಿಕೆ

Update: 2022-07-06 18:32 GMT

ಬೆಂಗಳೂರು, ಜು.6: ರಾಜ್ಯದಲ್ಲಿ ಸುಮಾರು 10,12,800 ಮಕ್ಕಳು ಶಾಲೆ ಹಾಗೂ ಅಂಗನವಾಡಿಗಳಿಂದ ಹೊರಗುಳಿದಿದ್ದಾರೆ ಎಂದು ರಾಜ್ಯ ಸರಕಾರ ಹೈಕೋರ್ಟ್ ಗೆ ಸಮೀಕ್ಷಾ ವರದಿ ಸಲ್ಲಿಸಿದೆ. 

ಕಡ್ಡಾಯ ಶಿಕ್ಷಣ ಕಾಯ್ದೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಹೈಕೋರ್ಟ್ 2013ರಲ್ಲಿ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. 

ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ(6-14 ವರ್ಷಗಳು) 15,388, ಶಾಲೆಗೆ ಎಂದಿಗೂ ದಾಖಲಾಗದ ಮಕ್ಕಳ ಸಂಖ್ಯೆ(6-14 ವರ್ಷಗಳು) 10,018, ಅಂಗನವಾಡಿಗೆ ದಾಖಲಾಗದ ಮಕ್ಕಳ ಸಂಖ್ಯೆ(0-3) 4,54,238, ಅಂಗನವಾಡಿಗೆ ದಾಖಲಾಗದ ಮಕ್ಕಳ ಸಂಖ್ಯೆ(4-6) 5,33,206 ಎಂದು ರಾಜ್ಯ ಸರಕಾರ ಹೈಕೋರ್ಟ್ ನ್ಯಾಯಪೀಠಕ್ಕೆ ವರದಿಯನ್ನು ಸಲ್ಲಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News