ಬಂಟ್ವಾಳ | ಶೆಡ್ ಮೇಲೆ ಗುಡ್ಡ ಕುಸಿತ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ

Update: 2022-07-07 05:32 GMT

ಬಂಟ್ವಾಳ, ಜು.7: ಪಂಜಿಕಲ್ಲು ಗ್ರಾಮದಲ್ಲಿ ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಬುಧವಾರ ಗುಡ್ಡ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಓರ್ವ ರಾತ್ರಿ  ಮೃತಪಟ್ಟಿದ್ದರೆ, ಇನ್ನೋರ್ವ ಮುಂಜಾವ ಕೊನೆಯುಸಿರೆಳೆದಿದ್ದಾನೆ. ಓರ್ವ ಬಂಟ್ವಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಣ್ಣಿನಡಿಯಿಂದ ರಕ್ಷಿಸಲ್ಪಟ್ಟು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಕಾರ್ಮಿಕರಾದ ಸಂತೋಷ್ ಆಲಫುಝ (46) ಮತ್ತು ಕೊಟ್ಟಾಯಂ ನಿವಾಸಿ ಬಾಬು (46) ಎಂಬವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಪಾಲಕ್ಕಾಡು ನಿವಾಸಿ ವಿಜು (46) ಎಂಬವರು ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದರು. ಕಣ್ಣೂರು ನಿವಾಸಿ ಜಾನ್ (44) ಎಂಬವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬವರ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಐವರು ಕಾರ್ಮಿಕರು ವಾಸವಿದ್ದ ಶೆಡ್ ಮೇಲೆ ಬುಧವಾರ ಸಂಜೆ ವೇಳೆ ಏಕಾಏಕಿ ಗುಡ್ಡ ಕುಸಿದಿತ್ತು. ಈ ವೇಳೆ ನಾಲ್ವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದರು. ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಮೂವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರು. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News