ಬಂಟ್ವಾಳ | ತುಂಬಿ ಹರಿಯುತ್ತಿದೆ ನೇತ್ರಾವತಿ: 8 ಮೀ. ದಾಟಿದ ನೀರಿನ ಮಟ್ಟ

Update: 2022-07-07 04:25 GMT

ಬಂಟ್ವಾಳ, ಜು.7: ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು ಗುರುವಾರ ಬೆಳಗ್ಗೆ ನದಿ ನೀರು 8 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ.

ಮೂರು ದಿನಗಳಿಂದ ನೀರಿನ ಮಟ್ಟ ಏರುತ್ತಲೇ ಸಾಗಿದ್ದು, ಇಂದು ಬೆಳಗ್ಗೆ 8 ಮೀಟರ್ ಗೆ ತಲುಪಿದೆ. ನೇತ್ರಾವತಿ ನದಿ ನೀರಿನ ಅಪಾಯದ ಮಟ್ಟ 8.5 ಮೀಟರ್ ಆಗಿದೆ. ಇನ್ನೂ ನೀರಿನ ಮಟ್ಟ ಏರಿಕೆಯಾದರೆ ನದಿ ಪಾತ್ರದ ತಗ್ಗು ಪ್ರದೇಶಗಳು ಮುಳುಗಡೆಯಾಗಲಿದೆ. 8.5 ಮೀಟರ್ ಗೆ ತಲುಪಿದರೆ ನೆರೆ ಉಂಟಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News