ಮಂಗಳೂರು ವಿವಿ‌ ಉಪ ಕುಲಪತಿ ಹೆಸರಲ್ಲಿ ನಕಲಿ ವಾಟ್ಸ್‌ಆ್ಯಪ್‌ ಪ್ರೊಫೈಲ್‌ ಸೃಷ್ಟಿಸಿ ವಂಚನೆಗೆ ಯತ್ನ: ದೂರು

Update: 2022-07-07 05:13 GMT

ಮಂಗಳೂರು, ಜು.7 ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಪಿ.ಎಸ್‌.ಯಡಪಡಿತ್ತಾಯ ಅವರ ಹೆಸರಿನಲ್ಲಿ ನಕಲಿ ವಾಟ್ಸ್‌ಆ್ಯಪ್‌ ಪ್ರೊಫೈಲ್‌ ಸೃಷ್ಟಿಸಿ, ವಂಚಿಸಲೆತ್ನಿಸಿರುವ ಬಗ್ಗೆ ಮಂಗಳೂರು ಸೈಬರ್ ಠಾಣೆಗೆ ದೂರು ನೀಡಲಾಗಿದೆ.

ಕುಲಪತಿಯ ಫೋಟೊ ಇರುವ ವಾಟ್ಸ್‌ಆ್ಯಪ್‌ ಪ್ರೊಫೈಲ್‌ ಸೃಷ್ಟಿಸಿ ಅದರಿಂದ ಸಂಪರ್ಕದಲ್ಲಿರುವ ಎಲ್ಲರಿಗೂ ಗಿಫ್ಟ್‌ ಕಾರ್ಡ್‌ ಖರೀದಿಸುವಂತೆ ಸಂದೇಶ ಕಳುಹಿಸಲಾಗಿತ್ತು ಎನ್ನಲಾಗಿದೆ. ಈ ಸಂದೇಶದ ಬಗ್ಗೆ  ಅನುಮಾನಗೊಂಡವರೊಬ್ಬರು ಕುಲಪತಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಉಪ ಕುಲಪತಿ ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News