ಉಡುಪಿ: ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳ ಜನನ

Update: 2022-07-07 07:02 GMT

ಉಡುಪಿ, ಜು.7:  ಇಲ್ಲಿನ ಹಾಜಿ ಅಬ್ದುಲ್ಲ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರು ಗುರುವಾರ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ 27 ವರ್ಷ ಪ್ರಾಯದ ಸಿದ್ದಿ ಜನಾಂಗ ಮೂಲದ 27 ವರ್ಷದ ಮಹಿಳೆ ತ್ರಿವಳಿ ಮಕ್ಕಳ ಜನ್ಮದಾತೆ. ಇವರಿಗೆ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಡಾ.ಕವಿಶಾ ಭಟ್, ಡಾ.ರಜನಿ ಕಾರಂತ್,

ಡಾ.ಸೂರ್ಯನಾರಾಯಣ, ಡಾ.ಗಣಪತಿ ಹೆಗಡೆ ಹಾಗೂ ಡಾ.ಮಹಾದೇವ ಭಟ್ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಸಿಸೇರಿಯನ್ ಹೆರಿಗೆ ಮಾಡಿಸಿದೆ. ಸದ್ಯ ತಾಯಿ ಮತ್ತು ತ್ರಿವಳಿಗಳು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News