ಜು.8 ಮತ್ತು 9ರಂದು ದ.ಕ. ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ : ಡಿಸಿ ಡಾ. ರಾಜೇಂದ್ರ

Update: 2022-07-07 15:09 GMT

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.8 ಶುಕ್ರವಾರ ಹಾಗೂ ಜು.9ರ ಶನಿವಾರದಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News