ಕಬಿನಿ ಜಲಾಶಯದಲ್ಲಿ ಒಳಹರಿವು ಹೆಚ್ಚಳ: ನದಿ ದಂಡೆಯಲ್ಲಿ ವಾಸಿಸುತ್ತಿರುವವರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

Update: 2022-07-07 16:55 GMT

ಮೈಸೂರು,ಜು.7: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕು ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು ಕಬಿನಿ ಜಲಾಶಯಕ್ಕೆ  ಒಳಹರಿವು ಹೆಚ್ಚಾಗುತ್ತಿದ್ದು ಜಲಾಶಯವು ಗರಿಷ್ಠ ಮಟ್ಟ ತಲುಪುವುದರಿಂದ ಸುಮಾರು 4000 ಕ್ಯೂಸೆಕ್ಸ್ ಗಳ ನೀರನ್ನು ನದಿಗೆ ಬಿಡಲಾಗುತ್ತಿದ್ದು ಯಾವ ಸಂದರ್ಭದಲ್ಲಾದರೂ ನದಿಗೆ ಹೆಚ್ಚು ನೀರು ಬಿಡುವ ಸಂಭವವಿದೆ.

ಆದ್ದರಿಂದ ಸಾರ್ವಜನಿಕರು ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ  ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಬಿನಿ ಜಲಾಶಯ ವಿಭಾಗ ಕಾರ್ಯಪಾಲಕ  ಅಭಿಯಂತರ ಎ.ಚಂದ್ರಶೇಖರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News