ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣ: ಎಫ್‍ಎಸ್‍ಎಲ್ ವರದಿ ಸಲ್ಲಿಕೆಗೆ ಸಿಐಡಿಗೆ ಹೈಕೋರ್ಟ್ ಸೂಚನೆ

Update: 2022-07-07 17:01 GMT

ಬೆಂಗಳೂರು, ಜು.7: ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಎಸ್‍ಎಲ್ ವರದಿ ಹಾಗೂ ಅಭ್ಯರ್ಥಿಗಳ ಓಎಂಆರ್ ಶೀಟ್‍ಗಳಲ್ಲಿನ ಬದಲಾವಣೆಗಳ ವಿವರಗಳನ್ನು ಸಲ್ಲಿಸುವಂತೆ ಹೈಕೋರ್ಟ್ ಗುರುವಾರ ಸಿಐಡಿಗೆ ಸೂಚಿಸಿದೆ.

ಎಸ್ಸೈ ನೇಮಕಾತಿ ಅಕ್ರಮ ಪ್ರಕರಣದ ಕೆಲವು ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಸೂಚನೆ ನೀಡಿದೆ. 

ಪಿಎಸ್ಸೈ ಅಕ್ರಮ ಪ್ರಕರಣದ ಕೆಲವು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಿದ್ದೇವೆ ಎಂದು ಸಿಐಡಿ ಪರ ವಕೀಲರು ಪೀಠಕ್ಕೆ ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News