ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ವೇದಿಕೆಯ ಸಮಿತಿ ಸಭೆ
ಮಂಗಳೂರು: ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯಕಾರಿ ಸಮಿತಿ ಸಭೆ ಸುಭಾಷ್ ನಗರ "ಟಿಪ್ಪು ಹೌಸ್" ನಲ್ಲಿ ನಡೆಯಿತು.
ಜಿಲ್ಲಾಧ್ಯಕ್ಷ ಎಚ್.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಸಬ್ರೀನ ಕೋಟೆಕಾರು ಮತ್ತು ಪ್ರಧಾನ ಕಾರ್ಯದರ್ಶಿ ರೇಶ್ಮಾ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾಮಗಾರಿ ಪೂರ್ಣಗೊಳ್ಳುತ್ತಿರುವ ನೂತನ "ಟಿಪ್ಪು ಹೌಸ್" ಹಸ್ತಾಂತರ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಲಾಯಿತು.
ಜಿಲ್ಲಾ ಸಮಿತಿ ಕಾನೂನು ಸಲಹೆಗಾರ ಆರ್.ಕೆ.ಮದನಿ ಅಮ್ಮೆಂಬಳ, ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೂತನ ಗೌರವಾಧ್ಯಕ್ಷ ಇಬ್ರಾಹಿಂ ಲಬ್ಬೈಕ್, ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ವಿಲ್ಫ್ರೆಡ್ ಡಿ ಸೋಜ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಶೀರ್ ಮುಲ್ಕಿ, ಅಬ್ದುಲ್ ಲತೀಫ್ ಬೆಂಗ್ರೆ, ಅಶ್ರಫ್ ಸುಭಾಶ್ ನಗರ, ಸದಸ್ಯರಾದ ಹಮೀದ್ ಬೆಂಗ್ರೆ, ಶೇಖ್ ಬಾವ ಹಾಜಿ ಮೊದಲಾದವರು ಉಪಸ್ಥಿತರಿದ್ದರು.