ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
Update: 2022-07-08 11:06 IST
ಬಂಟ್ವಾಳ, ಜು.8: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಶುಕ್ರವಾರ ಬೆಳಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದ್ದು ವಾಹನಗಳು ಸಾಲುಗಟ್ಟಿ ನಿಂತಿವೆ.
ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಆರಂಭವಾದ ಟ್ರಾಫಿಕ್ ಜಾಮ್ ಇನ್ನೂ ಮುಂದುವರಿದಿದೆ.
ಕಲ್ಲಡ್ಕ ಅಮ್ಟೂರು ಕ್ರಾಸ್ ಬಳಿ ಹೆದ್ದಾರಿಯ ನಡುವೆ ಕಾಂಕ್ರೀಟ್ ಪಿಲ್ಲರ್ ನಿರ್ಮಾಣಕ್ಕೆ ಬೃಹತ್ ಹೊಂಡ ತೋಡಲಾಗಿದ್ದು ಇದರಿಂದ ನಿರಂತರವಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.
ಬೆಳಗ್ಗೆ ಮತ್ತು ಸಂಜೆಯಿಂದ ರಾತ್ರಿ ವರೆಗೆ ಹೆಚ್ಚಿನ ಮಟ್ಟದಲ್ಲಿ ಸಂಚಾರಕ್ಕೆ ತಡೆ ಉಂಟಾಗುತ್ತಿದೆ. ತಾಸು ಗಟ್ಟಲೆ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುವ ಪರಿಸ್ಥಿತಿ ಇದೆ ಎಂದು ಸ್ಥಳೀಯರು ದೂರಿದ್ದಾರೆ.