ಕೆಆರ್ ಎಸ್ ಜಲಾಶಯ: 120 ಅಡಿ ದಾಟಿದ ನೀರಿನ ಮಟ್ಟ
Update: 2022-07-08 19:22 IST
ಮಂಡ್ಯ, ಜು.8: ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಕೃಷ್ಣರಾಜ ಸಾಗರ ಜಲಾಶಯ(ಕೆಆರ್ ಎಸ್)ಕ್ಕೆ ಹೆಚ್ಚು ನೀರು ಹರಿದು ಬರುತ್ತಿದ್ದು, ಜಲಾಶಯದ ಮಟ್ಟ 120 ಅಡಿ ದಾಟಿದೆ.
ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಿಷ್ಟಿದ್ದು, ಶುಕ್ರವಾರ ನೀರಿನಮಟ್ಟ 120.46 ಅಡಿ ತಲುಪಿದೆ. ಜಲಾಶಯಕ್ಕೆ 37,819 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಎರಡು ಮೂರು ದಿನದಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.
ಶುಕ್ರವಾರ ಜಲಾಶಯಕ್ಕೆ ಭೇಟಿ ನೀಡಿದ್ದ ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ನಾಲ್ಕೈದು ದಿನದಲ್ಲಿ ಜಲಾಶಯ ಭರ್ತಿಯಾಗಲಿದೆ. ಮುಂದಿನ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದರು.