ಜು.9ರಂದು ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
Update: 2022-07-08 19:57 IST
ಕಾರವಾರ: ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ ಸೂಚನೆಯನ್ವಯ ಜಿಲ್ಲೆಯಲ್ಲಿ ಜು. 9 ಮತ್ತು 10ರಂದು ಭಾರಿ ಮಳೆಯಾಗುವ ಸೂಚನೆ (ರೆಡ್ ಅಲರ್ಟ್) ನೀಡಲಾಗಿದ್ದು, ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಾರವಾರ, ಅಂಕೋಲಾ ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ ತಾಲೂಕುಗಳ ಎಲ್ಲಾ ಶಾಲಾ-ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಜು.9 ರಂದು ರಜೆ ಘೋಷಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.