ಸೇನೆ ಸೇರ್ಪಡೆಗೆ ತರಬೇತಿ
Update: 2022-07-08 20:49 IST
ಉಡುಪಿ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಸೇನೆಗೆ ಸೇರ ಬಯಸುವ ರಾಜ್ಯದ ಯುವಜನತೆಗೆ ಪೂರ್ವಭಾವಿ ತರಬೇತಿಯನ್ನು ನೀಡಲು ಓರ್ವ ಮಾಜಿ ಸೇನಾ ಅಧಿಕಾರಿ ಹಾಗೂ ದೈಹಿಕ ಶಿಕ್ಷಣ ತರಬೇತಿ ಹೊಂದಿರುವ ಮೂವರು ಮಾಜಿ ಸೈನಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ ೧೪ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ -dydirdswrmlore@gmail.com- ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.