×
Ad

ಕಾರ್ಮಿಕ ಅದಾಲತ್ ಪ್ರಚಾರಕ್ಕೆ ತೆರೆದ ವಾಹನ

Update: 2022-07-08 20:52 IST

ಉಡುಪಿ : ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಜುಲೈ ೧೫ರಿಂದ ಆಗಸ್ಟ್ ೧೫ರವರೆಗೆ ಕಾರ್ಮಿಕ ಅದಾಲತ್ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಕಾರ್ಮಿಕ ಅದಾಲತ್ ಕುರಿತ ಮಾಹಿತಿ ಹೊಂದಿರುವ ತೆರೆದ ವಾಹನ ರಥಕ್ಕೆ ಹಿರಿಯ ಸಿವಿಲ್ ನ್ಯಾಯ್ಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮತ್ತು ಜಿಪಂ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್ ಹಸಿರು ನಿಶಾನೆ ತೋರುವ ಮೂಲಕ ಜಿಲ್ಲಾ ಪಂಚಾಯತ್ ಆವರಣದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಜಿಲ್ಲಾ ಪಂಚಾಯತ್‌ನ ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News