ಅಮರನಾಥ್: ಗುಹಾ ದೇಗುಲದ ಬಳಿ ಮೇಘಸ್ಪೋಟ, 9 ಸಾವು
Update: 2022-07-08 21:25 IST
ಅಮರನಾಥ್: ಜಮ್ಮು ಮತ್ತು ಕಾಶ್ಮೀರದ ಅಮರನಾಥದ ಪವಿತ್ರ ಗುಹಾ ದೇಗುಲದ ಬಳಿ ಇಂದು ಸಂಜೆ 5:30ರ ಹೊತ್ತಿಗೆ ಮೇಘಸ್ಫೋಟ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ndtv.com ವರದಿ ಮಾಡಿದೆ.
ಇದುವರೆಗೂ ಹತ್ತು ಮೃತದೇಹಗಳು ಪತ್ತೆಯಾಗಿವೆ, ಹಲವರು ಕಾಣೆಯಾಗಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇತರ ಸಂಸ್ಥೆಗಳೂ ರಕ್ಷಣಾ ಕಾರ್ಯಾಚರಣೆಗೆ ಕೈಜೋಡಿಸಿವೆ.