ರಾಜ್ಯದಲ್ಲಿ ಶನಿವಾರ 989 ಮಂದಿಗೆ ಕೊರೋನ ದೃಢ; ಸಾವಿನ ಸಂಖ್ಯೆಯಲ್ಲಿ ಶೂನ್ಯ

Update: 2022-07-09 15:10 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.9: ರಾಜ್ಯದಲ್ಲಿ ಶನಿವಾರ 989 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 802 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,78,079ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,081ಕ್ಕೆ ತಲುಪಿದೆ.   
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 6,693ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 989 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 4, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 14, ಬೆಂಗಳೂರುನಗರ 927, ಚಿತ್ರದುರ್ಗ 1, ದಕ್ಷಿಣಕನ್ನಡ 21, ಧಾರವಾಡ 8, ಹಾಸನ 3, ಮಂಡ್ಯ 1, ಶಿವಮೊಗ್ಗ 6, ಉತ್ತರಕನ್ನಡ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ರಾಜಧಾನಿಯಲ್ಲಿ 927 ಜನರಿಗೆ ಕೊರೋನ ದೃಢ

 ರಾಜಧಾನಿಯಲ್ಲಿ ಶನಿವಾರದಂದು 927 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 750 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 18,120,65 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,970 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News