ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿ ರಚನೆ

Update: 2022-07-09 15:57 GMT

ಬೆಂಗಳೂರು, ಜು.9: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ರಾಜ್ಯ ಕಾಂಗ್ರೆಸ್ ಸಮಿತಿಯ ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚನೆ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುಜೇವಾಲ ಈ ಸಮಿತಿಯ ಸಂಚಾಲಕರಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಎಚ್.ಮುನಿಯಪ್ಪ, ಎಐಸಿಸಿ ಕಾರ್ಯದರ್ಶಿಗಳಾದ ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್, ಮಾಜಿ ಸಿಎಂ ವೀರಪ್ಪ ಮೊಯ್ಲಿ.

ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸಲೀಮ್ ಅಹ್ಮದ್, ಆರ್.ಧೃವನಾರಾಯಣ, ಸಂಸದ ಡಿ.ಕೆ.ಸುರೇಶ್, ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್.

ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಕೆ.ಜೆ.ಜಾರ್ಜ್, ಸುನೀಲ್ ಕನುಗೋಲು, ಶಾಸಕ ಕೃಷ್ಣಭೈರೇಗೌಡ, ಯುವ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂವೀರಭದ್ರಪ್ಪ, ಎಐಸಿಸಿ ಕಾರ್ಯದರ್ಶಿಗಳಾದ ಬೋಸರಾಜು, ಸಂದೀಪ್‍ರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಮಾಜಿ ಸಚಿವರಾದ ಎಚ್.ಆಂಜನೇಯ, ರಮಾನಾಥ ರೈ, ವಿನಯ್‍ಕುಮಾರ್ ಸೊರಕೆ, ರಾಣಿ ಸತೀಶ್, ಉಮಾಶ್ರೀ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಡಾ.ಅಂಜಲಿ ನಿಂಬಾಳ್ಕರ್ ಅವರನ್ನು ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News