ವಾಹನ ಢಿಕ್ಕಿ: ಮಹಿಳೆ ಮೃತ್ಯು
Update: 2022-07-09 21:50 IST
ಕುಂದಾಪುರ : ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ಮಹಿಳೆ ಯೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿ ಗ್ರಾಮದ ಕಾಶಿಮಠ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಜು.೯ರಂದು ನಸುಕಿನ ವೇಳೆ ಒಂದು ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಯಳಜಿತ್ ಗ್ರಾಮದ ಜತ್ನಾಡಿ ಹುಲ್ಕಟ್ಗಿಯ ಚಂದು (೫೭) ಎಂದು ಗುರುತಿಸಲಾಗಿದೆ. ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ವಾಹನವೊಂದು ಅದೇ ದಿಕ್ಕಿನಲ್ಲಿ ನಡೆದುಕೊಂಡು ಬರುತ್ತಿದ್ದ ಚಂದು ಅವರಿಗೆ ಡಿಕ್ಕಿ ಹೊಡೆದು ನಿಲ್ಲಿಸದೇ ಪರಾರಿಯಾಗಿದೆ. ಈ ಅಪಘಾತದಿಂದ ಗಂಭೀರ ವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.