ಭಾರೀ ಮಳೆ: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Update: 2022-07-10 05:57 GMT

ಶಿವಮೊಗ್ಗ:  ಶಿವಮೊಗ್ಗ ಜಿಲ್ಲೆಯನ್ನು  ಕರಾವಳಿಗೆ ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ  ಭಾರೀ ಮಳೆಯಾಗುತ್ತಿರುವ  ಹಿನ್ನಲೆಯಲ್ಲಿ ಇಂದು ಮುಂಜಾನೆ ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದಾಗಿ  ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ತಿರುವಿನಲ್ಲಿ ಹೋದವರು ವಾಪಸ್​ ಆಗುತ್ತಿದ್ದಾರೆ. ಇನ್ನೂ ಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ. ಮೇಲ್ಬಾಗ ಆಗುಂಬೆ ಘಾಟಿ ಚೆಕ್​ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ.

ಬದಲಿ ರಸ್ತೆ ಉಪಯೋಗಿಸುವಂತೆ ಜಿಲ್ಲಾಡಳಿತ ಸೂಚನೆ

ಉಡುಪಿ: ಹೆಬ್ರಿ ತಾಲೂಕು ಆಗುಂಬೆ  ಘಾಟ್ ನ ನಾಲ್ಕನೇ ತಿರುವಿನಲ್ಲಿ ಸುಮಾರು 30 ಮೀಟರ್ ಭೂಕುಸಿತ ಉಂಟಾಗಿದ್ದು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇದಕ್ಕೆ ಸುಮಾರು 3 ಗಂಟೆಗಳ ಕಾಲ ಹಿಡಿಯುತ್ತದೆ.

ತಾತ್ಕಾಲಿಕವಾಗಿ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರು ಬದಲಿ ರಸ್ತೆ ಉಪಯೋಗಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News