×
Ad

ಕೊಚ್ಚಿಹೋಗುತ್ತಿದ್ದ ವ್ಯಕ್ತಿಯ ರಕ್ಷಣೆಗೆ ಪ್ರವಾಹಕ್ಕೆ ಧುಮುಕಿದ ಪೊಲೀಸರು!

Update: 2022-07-10 14:04 IST

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಪಾರು ಮಾಡಲು ಇಬ್ಬರು ಪೊಲೀಸ್ ಅಧಿಕಾರಿಗಳು ಪ್ರವಾಹದಲ್ಲಿ ಧುಮುಕಿ ಈಜುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಎನ್‍ಸಿಪಿ ನಾಯಕಿ ಹಾಗೂ ಸಂಸದೆ ಸುಪ್ರಿಯಾ ಸುಳೆ ಈ ವಿಡಿಯೊವನ್ನು ಶನಿವಾರ ಟ್ವಿಟರ್‍ನಲ್ಲಿ ಶೇರ್ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳಾದ ಪುಣೆ ದತ್ತವಾಡಿಯ ಸದ್ದಾಂ ಶೇಖ್ ಹಾಗೂ  ಅಜಿತ್ ಪೊಕಾರೆ, ಶಿವಾನೆ ಗ್ರಾಮದ ಬಗೂಲ್ ಉದ್ಯಾನ್ ಎಂಬಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಲು ಹರಿಯುವ ಪ್ರವಾಹಕ್ಕೆ ಧುಮುಕುವುದು ವೀಡಿಯೊದಲ್ಲಿ ಕಾಣಿಸುತ್ತಿದೆ.

ತಮ್ಮದೇ ಜೀವಕ್ಕೆ ಅಪಾಯವಿದ್ದರೂ ಲೆಕ್ಕಿಸದೇ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಲು ಇಬ್ಬರು ಅಧಿಕಾರಿಗಳು ತೋರಿದ ಸಾಹಸ ಶ್ಲಾಘನೀಯ. ಮಹಾರಾಷ್ಟ್ರ ಪೊಲೀಸರ ಬಗ್ಗೆ ನಮಗೆ ಹೆಮ್ಮೆ ಎನಿಸುತ್ತದೆ ಎಂದು ಸುಳೆ ಟ್ವೀಟ್ ಮಾಡಿದ್ದಾರೆ. ಇಬ್ಬರು ಅಧಿಕಾರಿಗಳ ಸಾಹಸವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ಮಂದಿ ಶ್ಲಾಘಿಸಿದ್ದಾರೆ.

ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳು ಪ್ರವಾಹದ ಸುಳಿಯಲ್ಲಿ ಸಿಲುಕಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News