×
Ad

ಗೋವಾ: ಕಾಂಗ್ರೆಸ್ ಶಾಸಕಾಂಗ ಸಭೆಗೆ ಏಳು ಶಾಸಕರು ಗೈರು, ಭಿನ್ನಾಭಿಪ್ರಾಯ ಸ್ಫೋಟ

Update: 2022-07-10 15:04 IST
Photo:PTI

ಪಣಜಿ: ಕೆಲವು ನಾಯಕರಲ್ಲಿ ಅಸಮಾಧಾನವಿದ್ದು ಬಿಜೆಪಿಯೊಂದಿಗೆ ಸಂಪರ್ಕ ದಲ್ಲಿದ್ದಾರೆ ಎಂಬ  ವರದಿಯ ನಡುವೆ ವಿಧಾನಸಭೆಯ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಗೋವಾದ ಕಾಂಗ್ರೆಸ್ 7 ಶಾಸಕರು ಪಕ್ಷದ ಸಭೆಗೆ ಗೈರುಹಾಜರಾಗಿದ್ದಾರೆ ಎಂದು ಮೂಲಗಳು ರವಿವಾರ ತಿಳಿಸಿವೆ.

ವಿಧಾನಸಭೆಯ ಎರಡು ವಾರಗಳ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕಾಂಗ್ರೆಸ್  ತಿಳಿಸಿದೆ.

ಆಡಳಿತಾರೂಢ ಬಿಜೆಪಿಯಿಂದ ಇಂತಹ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಗೋವಾ ಕಾಂಗ್ರೆಸ್ ಮುಖ್ಯಸ್ಥ ಅಮಿತ್ ಪಾಟ್ಕರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮೂಲಗಳ ಪ್ರಕಾರ, ಈ ವರ್ಷದ ಆರಂಭದಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ  ದಿಗಂಬರ್ ಕಾಮತ್ ಶನಿವಾರ ನಡೆದ ಶಾಸಕರ ಸಭೆಯಲ್ಲಿ ಹಾಜರಾಗಿರಲಿಲ್ಲ

ಮೈಕೆಲ್ ಲೋಬೋ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿದ್ದಕ್ಕೆ ಕಾಮತ್ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನು ಪಕ್ಷ ನಿರಾಕರಿಸಿದೆ.

ಗೋವಾದ 40 ಸದಸ್ಯ ಬಲದ ವಿಧಾನಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 25 ಹಾಗೂ  ಪ್ರತಿಪಕ್ಷ ಕಾಂಗ್ರೆಸ್‌ನಿಂದ 11 ಸದಸ್ಯರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News