ರಾಷ್ಟ್ರಪತಿ ಚುನಾವಣೆ: ಬೆಂಗಳೂರಿಗೆ ಆಗಮಿಸಿದ NDA ಅಭ್ಯರ್ಥಿ ದ್ರೌಪದಿ ಮುರ್ಮು

Update: 2022-07-10 13:12 GMT

ಬೆಂಗಳೂರು: ರಾಷ್ಟ್ರಪತಿ ಚುನಾವಣಾ ಪ್ರಚಾರ ನಿಮಿತ್ತ ಬೆಂಗಳೂರಿಗೆ ಇಂದು ಸಂಜೆ ಆಗಮಿಸಿದ್ದಾರೆ. 

ಖಾಸಗಿ ಹೋಟೆಲ್‌ನಲ್ಲಿ ಮುರ್ಮು ಅವರು ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ಅವರು ತಮ್ಮ ಪರವಾಗಿ ಮತಯಾಚನೆ ಮಾಡಲಿದ್ದಾರೆ. 

ಮುರ್ಮು ಅವರನ್ನು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಹಕಾರ ಖಾತೆ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಅನೇಕ‌ ಸಚಿವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News