ರಾಷ್ಟ್ರಪತಿ ಚುನಾವಣೆ: ಎಚ್.ಡಿ.ದೇವೇಗೌಡ ಭೇಟಿಯಾದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು
Update: 2022-07-10 20:36 IST
ಬೆಂಗಳೂರು: ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಹಾಗೂ ಮಿತ್ರಪಕ್ಷಗಳ ಅಭ್ಯರ್ಥಿ ದ್ರೌಪದಿ ಮುರ್ಮು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ರವಿವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ ಬೆಂಬಲ ಕೋರಿದರು.
ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಿಶನ್ ರೆಡ್ಡಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಭಾಗವಹಿಸಿದ್ದರು. ಜೊತೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಹೆಚ್.ಡಿ. ರೇವಣ್ಣ ಉಪಸ್ಥಿತರಿದ್ದರು.
ಅಭ್ಯರ್ಥಿ ದ್ರೌಪದಿ ಮುರ್ಮು ಇಂದು (ರವಿವಾರ) ಸಂಜೆ ಬೆಂಗಳೂರಿಗೆ ಪ್ರಚಾರ ಸಭೆಗೆ ಆಗಮಿಸಿದ್ದು, ಈ ವೇಳೆ ಬಿಜೆಪಿ ಸಂಸದರು ಹಾಗೂ ಶಾಸಕರ ಸಭೆಯಲ್ಲೂ ಭಾಗವಹಿಸಿದ್ದರು.
ಜುಲೈ18 ರಂದು ಚುನಾವಣೆ ನಡೆಯಲಿದ್ದು, ಜುಲೈ 21ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24ರಂದು ಅಂತ್ಯಗೊಳ್ಳಲಿದೆ.