ಮಂಗಳೂರು; ಸ್ಪೈಸ್ ಜೆಟ್ ವಿಮಾನ ವೇಳಾ ಪಟ್ಟಿಯಲ್ಲಿ ವ್ಯತ್ಯಾಸ ಸಾಧ್ಯತೆ

Update: 2022-07-10 16:21 GMT
ಸಾಂದರ್ಭಿಕ ಚಿತ್ರ

ಬಜ್ಪೆ, ಜು.10: ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಸಂಚರಿಸುವ ಸ್ಪೈಸ್ ಜೆಟ್ ವಿಮಾನಗಳ ವೇಳಾ ಪಟ್ಟಿಯಲ್ಲಿ ವ್ಯತ್ಯಾಸಗಳು ಆಗುವ ಸಾಧ್ಯತೆ ಇದೆ ಎಂದು ಸ್ಪೈಸ್ ಜೆಟ್  ಏರ್ ಲೈನ್ಸ್ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ  ಸ್ಪೈಸ್ ಜೆಟ್  ಏರ್ ಲೈನ್ಸ್, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹವಾಮಾನ ಕೆಟ್ಟದಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಸ್ಪೈಸ್  ಏರ್ ಲೈನ್ಸ್ ವಿಮಾನಗಳ ವೇಳಾಪಟ್ಟಿಯಲ್ಲಿ ವ್ಯತ್ಯಾಸಗಳ ಆಗುವ ಸಾಧ್ಯತೆಗಳು ಇರುವುದರಿಂದ ಪ್ರಯಾಣಿಕರು bit.ly/2tG9xBx ವೆಬ್‌ ಸೈಟ್ ಮೂಲಕ ವಿಮಾನ ಯಾನ ವೇಳಾಪಟ್ಟಿಯನ್ನು ಪರಿಶೀಲಿಸುವಂತೆ ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News